Luke 5:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
Kannada BSI Bible 2016
ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಆತನು ಹೊರಟು ಸುಂಕಕ್ಕೆ ಕೂತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.