Luke 5:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
Kannada BSI Bible 2016
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.
Kannada Bible (KNCL) BSI 2016
ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.