Luke 5:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಸೀಮೋನನ ದೋಣಿಯಲ್ಲಿ ಹತ್ತಿ ಕುಳಿತುಕೊಂಡು ದೋಣಿಯನ್ನು ದಡದಿಂದ ಸ್ವಲ್ಪದೂರಕ್ಕೆ ನೂಕಬೇಕೆಂದು ಸೀಮೋನನಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
Kannada BSI Bible 2016
ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೋಣಿಗಳಲ್ಲಿ ಸೀಮೋನನ ಒಂದು ದೋಣಿಯನ್ನು ಆತನು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಆತನು ಕೂತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
Kannada Bible (KNCL) BSI 2016
ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.