Luke 5:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
Kannada BSI Bible 2016
ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟ ಮಾಡುವದೇಕೆ ಎಂದು ಕೇಳಿದರು.
Kannada Bible (KNCL) BSI 2016
ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.