Luke 5:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರಿಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯಲು ನಾನು ಬಂದವನಲ್ಲ, ಪಾಪಿಗಳನ್ನು ಕರೆಯಲು ಬಂದವನು!” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
Kannada BSI Bible 2016
ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.
Kannada Bible (KNCL) BSI 2016
ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.