Luke 5:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
Kannada BSI Bible 2016
ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನಿಗೆ - ಯೋಹಾನನ ಶಿಷ್ಯರು ಪದೇಪದೇ ಉಪವಾಸಗಳನ್ನೂ ವಿಜ್ಞಾಪನೆಗಳನ್ನೂ ಮಾಡುತ್ತಾ ಇದ್ದಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ, ಕುಡಿಯುತ್ತಾರೆ ಎಂದು ಹೇಳಲು
Kannada Bible (KNCL) BSI 2016
“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.