Luke 5:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮದುಮಗನು ಅವರ ಬಳಿಯಿಂದ ಹೊರಟುಹೋಗುವ ಕಾಲ ಬರುತ್ತದೆ. ಆಗ ಅವನ ಸ್ನೇಹಿತರು ಉಪವಾಸ ಮಾಡುವರು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
Kannada BSI Bible 2016
ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ. ಆ ಕಾಲದಲ್ಲೇ ಉಪವಾಸ ಮಾಡುವರು ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.