Luke 5:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
Kannada BSI Bible 2016
ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ಹರಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೇದಕ್ಕೆ ಒಪ್ಪುವದೂ ಇಲ್ಲ.
Kannada Bible (KNCL) BSI 2016
ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.