Luke 5:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
Kannada BSI Bible 2016
ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ತಾನೂ ಚೆಲ್ಲಿಹೋಗುವದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುವವು.
Kannada Bible (KNCL) BSI 2016
ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.