Luke 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
Kannada BSI Bible 2016
ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಕಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡು ಅವರ ಬಲೆಗಳು ಹರಿದುಹೋಗುತ್ತಿದ್ದವು.
Kannada Bible (KNCL) BSI 2016
ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.