Luke 5:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸ್ನೇಹಿತರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಮೀನುಗಳನ್ನು ತುಂಬಿಸಲು ದೋಣಿಗಳೆರಡೂ ಮುಳುಗುವಂತಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
Kannada BSI Bible 2016
ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.
Kannada Bible (KNCL) BSI 2016
ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.