Luke 6:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದಾನೊಂದು ಸಬ್ಬತ್‌ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದನು. ಆತನ ಶಿಷ್ಯರು ತೆನೆಗಳನ್ನು ಕಿತ್ತು, ಕೈಗಳಲ್ಲಿ ಹೊಸಕಿ ಕಾಳನ್ನು ತಿಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.
Kannada BSI Bible 2016
ಇದಾದ ಮೇಲೆ ಮೊದಲನೇ ಸಬ್ಬತ್ತಿನ ತರುವಾಯ ಎರಡನೇ ಸಬ್ಬತ್ತಿನಲ್ಲಿ ಆತನು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದನು. ಆಗ ಆತನ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.
Kannada Bible (KNCL) BSI 2016
ಒಂದು ಸಬ್ಬತ್‍ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.