Luke 6:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು.
Kannada BSI Bible 2016
ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುತ್ತಲೂ ಅವರೆಲ್ಲರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈ ವಾಸಿಯಾಯಿತು.
Kannada Bible (KNCL) BSI 2016
ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.