Luke 6:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Kannada BSI Bible 2016
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡದ್ದಲ್ಲದೆ ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.
Kannada Bible (KNCL) BSI 2016
ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.