Luke 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು.
Kannada BSI Bible 2016
ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್‌ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಆತನು ಅವರ ಸಂಗಡ ಬೆಟ್ಟದಿಂದ ಇಳಿದು ಸಮಭೂವಿುಯಲ್ಲಿ ನಿಂತನು. ಆತನ ಶಿಷ್ಯರ ದೊಡ್ಡ ಗುಂಪು ಮತ್ತು ಎಲ್ಲಾ ಯೂದಾಯದಿಂದಲೂ ಯೆರೂಸಲೇವಿುನಿಂದಲೂ ತೂರ್ ಸೀದೋನ್ ಪಟ್ಟಣಗಳಿರುವ ಸಮುದ್ರತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದವು. ಆ ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ವಾಸಿಮಾಡಿಸಿಕೊಳ್ಳುವದಕ್ಕೂ ಬಂದಿದ್ದರು.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ