Luke 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು.
Kannada BSI Bible 2016
ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.
Kannada Bible (KNCL) BSI 2016
ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,