Luke 6:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.
Kannada BSI Bible 2016
ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನು ವಾಸಿಮಾಡುತ್ತಿದ್ದದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವದಕ್ಕೆ ಪ್ರಯತ್ನಮಾಡಿದರು.
Kannada Bible (KNCL) BSI 2016
ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.