Luke 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
Kannada BSI Bible 2016
ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.
Kannada Bible (KNCL) BSI 2016
ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.