Luke 6:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.
Kannada BSI Bible 2016
ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ.
Kannada Bible (KNCL) BSI 2016
ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.