Luke 6:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.
Kannada BSI Bible 2016
ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಾವು ಕೊಟ್ಟಷ್ಟು ತಮಗೆ ತಿರಿಗಿ ಸಿಕ್ಕೀತೆಂದು ಪಾಪಿಷ್ಠರಿಗೆ ಸಾಲ ಕೊಡುತ್ತಾರಲ್ಲಾ.
Kannada Bible (KNCL) BSI 2016
ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.