Luke 6:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Kannada BSI Bible 2016
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Kannada Bible (KNCL) BSI 2016
“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.