Luke 6:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
Kannada BSI Bible 2016
ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;
Kannada Bible (KNCL) BSI 2016
“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.