Luke 6:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
Kannada BSI Bible 2016
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡಿರಿ, ಆಗ ನಿಮಗೂ ಕೊಡುವರು; ಜಡಿದು ಅಲ್ಲಾಡಿಸಿ ಹೊರಚೆಲ್ಲುವ ಹಾಗೆ ತುಂಬಾ ಅಳತೆಯನ್ನು ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು ಅಂದನು.
Kannada Bible (KNCL) BSI 2016
ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.