Luke 6:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
Kannada BSI Bible 2016
ಆತನು ಒಂದು ಸಾಮ್ಯವನ್ನು ಅವರಿಗೆ ಹೇಳಿ ದನು--ಕುರುಡನು ಕುರುಡನನ್ನು ನಡಿಸಬಲ್ಲನೋ? (ನಡಿಸಿದರೆ) ಅವರಿಬ್ಬರೂ ಕುಣಿಯಲ್ಲಿ ಬೀಳುವದಿ ಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರೀ ತೋರಿಸುವದಕ್ಕಾದೀತೇ? ಅವರಿಬ್ಬರೂ ಕುಣಿಯಲ್ಲಿ ಬೀಳುವರಲ್ಲವೆ.
Kannada Bible (KNCL) BSI 2016
ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?