Luke 6:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಾನೂ ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ಉತ್ತರಿಸಿ,
Kannada BSI Bible 2016
ಅವನು ದೇವರ ಮನೆಯೊಳಗೆ ಹೋಗಿ ಯಾಜಕರು ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖ ರೊಟ್ಟಿಯನ್ನು ತೆಗೆದುಕೊಂಡು ತಿಂದು ತನ್ನ ಜೊತೆಯಲ್ಲಿದ್ದವರಿಗೆ ಸಹ ಹೇಗೆ ಕೊಟ್ಟನೆಂಬದನು ನೀವು ಓದಲಿಲ್ಲವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತೆಗೆದುಕೊಂಡು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ? ಎಂದು ಉತ್ತರಕೊಟ್ಟು
Kannada Bible (KNCL) BSI 2016
ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.