Luke 6:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.
Kannada BSI Bible 2016
ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.
Kannada Bible (KNCL) BSI 2016
ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.