Luke 6:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.
Kannada BSI Bible 2016
ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವದು. ಯಾಕಂದರೆ ಮುಳ್ಳುಗಳಲ್ಲಿ ಮನುಷ್ಯರು ಅಂಜೂರ ಗಳನ್ನು ಕೂಡಿಸುವದಿಲ್ಲ; ಇಲ್ಲವೆ ಗಜ್ಜುಗದ ಪೊದೆಯಲ್ಲಿ ದ್ರಾಕ್ಷೇಗಳನ್ನು ಕೂಡಿಸುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವದಿಲ್ಲ; ಗಜ್ಜುಗದ ಮೆಳೆಯಲ್ಲಿ ದ್ರಾಕ್ಷೇಹಣ್ಣುಗಳನ್ನು ಕೊಯ್ಯುವದಿಲ್ಲ.
Kannada Bible (KNCL) BSI 2016
ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ.