Luke 6:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟಬೊಕ್ಕಸದೊಳಗಿನಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.
Kannada BSI Bible 2016
ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.
Kannada Bible (KNCL) BSI 2016
ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.