Luke 6:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”
Kannada BSI Bible 2016
ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು.
Kannada Bible (KNCL) BSI 2016
ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”