Luke 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು.
Kannada BSI Bible 2016
ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.
Kannada Bible (KNCL) BSI 2016
ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.