Luke 6:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರಿಗೆ, “ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ಸಬ್ಬತ್ ದಿನದಲ್ಲಿ ಯಾವುದನ್ನು ಮಾಡುವುದು ನ್ಯಾಯ? ಮೇಲನ್ನು ಮಾಡುವುದೋ ಅಥವಾ ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ಹಾಳುಮಾಡುವುದೋ?” ಎಂದು ಕೇಳಿ,
Kannada BSI Bible 2016
ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್‌ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಎದ್ದು ನಿಂತುಕೊಂಡನು. ಆಗ ಯೇಸು ಅವರಿಗೆ - ನಿಮ್ಮನ್ನು ಒಂದು ಮಾತು ಕೇಳುತ್ತೇನೆ; ಸಬ್ಬತ್‍ದಿನದಲ್ಲಿ ಯಾವದನ್ನು ಮಾಡುವದು ನ್ಯಾಯ? ಮೇಲನ್ನು ಮಾಡುವದೋ, ಕೇಡನ್ನು ಮಾಡುವದೋ? ಪ್ರಾಣವನ್ನು ಉಳಿಸುವದೋ, ಹಾಳುಮಾಡುವದೋ ಎಂದು ಹೇಳಿ
Kannada Bible (KNCL) BSI 2016
ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.