Luke 7:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಯೇಸು ನಾಯಿನ್ ಎಂಬ ಊರಿಗೆ ಹೋದನು. ಯೇಸುವಿನೊಡನೆ ಆತನ ಶಿಷ್ಯರೂ ಹೋಗುತ್ತಿದ್ದರು. ಅವರೊಡನೆ ಅನೇಕ ಜನರು ದೊಡ್ಡ ಸಮೂಹವಾಗಿ ಹೋಗುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ವಲ್ಪಕಾಲದ ನಂತರ ಆತನು ನಾಯಿನ್ ಎಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರು ಮತ್ತು ಬಹುಜನರು ಹೋದರು.
Kannada BSI Bible 2016
ಇದಾದ ಮೇಲೆ ಮಾರಣೆಯ ದಿನ ಆತನು ನಾಯಿನೆಂಬ ಪಟ್ಟಣಕ್ಕೆ ಹೋದನು. ಆಗ ಆತನ ಶಿಷ್ಯರಲ್ಲಿ ಅನೇಕರೂ ಬಹು ಜನರೂ ಆತನ ಸಂಗಡ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ವಲ್ಪಕಾಲದ ಮೇಲೆ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ ಇನ್ನೂ ಅನೇಕ ಜನರೂ ಹೋಗುತ್ತಿದ್ದರು.
Kannada Bible (KNCL) BSI 2016
ಇದಾದನಂತರ ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ, ಯೇಸು ನಾಯಿನ್ ಎಂಬ ಪಟ್ಟಣಕ್ಕೆ ಹೋದರು. ಆಗ ಅವರ ಶಿಷ್ಯರೂ ಜನರ ದೊಡ್ಡ ಗುಂಪೂ ಅವರ ಸಂಗಡ ಹೋದರು.