Luke 7:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.
Kannada BSI Bible 2016
ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.
Kannada Bible (KNCL) BSI 2016
ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.