Luke 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.
Kannada BSI Bible 2016
ಆತನು ಬಂದು ಪೆಟ್ಟಿಗೆಯನ್ನು ಮುಟ್ಟಿದಾಗ ಅದನ್ನು ಹೊತ್ತುಕೊಂಡಿದ್ದವರು ಕದಲದೆ ನಿಂತರು; ಆಗ ಆತನು--ಯೌವನಸ್ಥನೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.