Luke 7:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
Kannada BSI Bible 2016
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.
Kannada Bible (KNCL) BSI 2016
ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.