Luke 7:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?” ಎಂದು ಕೇಳುವುದಕ್ಕಾಗಿ ಅವರನ್ನು ಪ್ರಭುವಿನ (ಯೇಸುವಿನ) ಬಳಿಗೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.
Kannada BSI Bible 2016
ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಯೇಸುವಿನ ಬಳಿಗೆ ಕಳುಹಿಸಿ--ಬರಬೇಕಾದವನು ನೀನೋ? ಇಲ್ಲವೆ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ ಎಂದು ಕೇಳಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.
Kannada Bible (KNCL) BSI 2016
ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.