Luke 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ಯೇಸುವಿನ ಬಳಿಗೆ ಬಂದು, “ಸ್ನಾನಿಕ ಯೋಹಾನನು ‘ಬರಬೇಕಾದವನು ನೀನೋ ಅಥವಾ ಬೇರೊಬ್ಬ ವ್ಯಕ್ತಿಗಾಗಿ ನಾವು ಕಾಯಬೇಕೋ?’ ಎಂದು ನಿನ್ನನ್ನು ಕೇಳುವುದಕ್ಕಾಗಿ ನಮ್ಮನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೇಸುವಿನ ಬಳಿಗೆ ಬಂದು, “‘ಬರಬೇಕಾದವನು ನೀನೋ ಅಥವಾ ನಾವು ಮತ್ತೊಬ್ಬನ ಬರುವಿಕೆಗಾಗಿ ಕಾಯಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಅಂದರು.
Kannada BSI Bible 2016
ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನ ಬಳಿಗೆ ಬಂದು - ಬರಬೇಕಾದವನು ನೀನೋ, ನಾವು ಮತ್ತೊಬ್ಬನ ದಾರಿಯನ್ನು ನೋಡಬೇಕೋ ಎಂದು ಕೇಳುವದಕ್ಕಾಗಿ ಸ್ನಾನಿಕನಾದ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದರು.
Kannada Bible (KNCL) BSI 2016
ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರು ನೋಡಬೇಕೊ ಎಂದು ವಿಚಾರಿಸಲು ಸ್ನಾನಿಕ ಯೊವಾನ್ನ ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.