Luke 7:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು.
Kannada BSI Bible 2016
ಅದೇಗಳಿಗೆಯಲ್ಲಿ ರೋಗ ಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಆತನು ಗುಣಪಡಿಸಿದನು; ಕುರುಡರಾದ ಅನೇಕರಿಗೆ ದೃಷ್ಟಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು.
Kannada Bible (KNCL) BSI 2016
ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.