Luke 7:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಯೋಹಾನನ ಶಿಷ್ಯರಿಗೆ, “ನೀವು ಇಲ್ಲಿ ಕಂಡು ಕೇಳಿದ ಸಂಗತಿಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ. ಕುರುಡರಿಗೆ ದೃಷ್ಟಿ ಬರುತ್ತದೆ, ಕುಂಟರು ಕಾಲನ್ನು ಪಡೆದು ನಡೆಯುತ್ತಾರೆ. ಕುಷ್ಠರೋಗಿಗಳು ಗುಣಹೊಂದುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರಿಗೆ ಜೀವ ಬರುತ್ತದೆ ಮತ್ತು ದೇವರ ರಾಜ್ಯದ ಸುವಾರ್ತೆಯು ಬಡವರಿಗೆ ಕೊಡಲ್ಪಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.
Kannada BSI Bible 2016
ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಆತನು ಅವರಿಗೆ ಪ್ರತ್ಯುತ್ತರವಾಗಿ - ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರಿಗೆ ಕಣ್ಣು ಬರುತ್ತವೆ, ಕುಂಟರಿಗೆ ಕಾಲು ಬರುತ್ತವೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರಿಗೆ ಕಿವಿ ಬರುತ್ತವೆ, ಸತ್ತವರು ಜೀವವನ್ನು ಹೊಂದುತ್ತಾರೆ, ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
Kannada Bible (KNCL) BSI 2016
ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.