Luke 7:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಏನನ್ನು ನೋಡಲು ಹೊರಗೆ ಹೋದಿರಿ? ನಯವಾದ ಉಡುಪನ್ನು ಧರಿಸಿರುವ ಮನುಷ್ಯನನ್ನೋ? ಇಲ್ಲ. ನಯವಾದ ಮತ್ತು ಚಂದವಾದ ಉಡುಪನ್ನು ಧರಿಸಿದವರು ಅರಮನೆಗಳಲ್ಲಿ ವಾಸಮಾಡುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
Kannada BSI Bible 2016
ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.
Kannada Bible (KNCL) BSI 2016
ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ.