Luke 7:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಇಗೋ! ನಾನು (ದೇವರು) ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.
Kannada BSI Bible 2016
ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸರಿಮಾಡುವನು ಎಂದು ಯಾರ ವಿಷಯವಾಗಿ ಬರೆದಿದೆಯೋ ಆ ಪುರುಷನು ಇವನೇ.
Kannada Bible (KNCL) BSI 2016
“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ - ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’