Luke 7:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಲೋಕದಲ್ಲಿ ಹುಟ್ಟಿದ ಎಲ್ಲಾ ಮನುಷ್ಯರಲ್ಲಿ ಯೋಹಾನನೇ ದೊಡ್ಡವನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೂ ದೇವರ ರಾಜ್ಯದಲ್ಲಿರುವ ಕನಿಷ್ಠನು ಸಹ ಅವನಿಗಿಂತ ಶ್ರೇಷ್ಠನೇ ಸರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ಮಹಾಪುರುಷನು ಒಬ್ಬನೂ ಹುಟ್ಟಿಲ್ಲ, ಅದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು” ನಿಮಗೆ ಹೇಳುತ್ತೇನೆ.
Kannada BSI Bible 2016
ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ದೊಡ್ಡವನು ಒಬ್ಬನೂ ಇಲ್ಲ; ಆದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.