Luke 7:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.
Kannada BSI Bible 2016
ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
Kannada Bible (KNCL) BSI 2016
ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.