Luke 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಸುದ್ದಿಯನ್ನು ಕೇಳಿದಾಗ, ಅವನು ಕೆಲವು ಹಿರಿಯ ಯೆಹೂದ್ಯನಾಯಕರನ್ನು ಆತನ ಬಳಿಗೆ ಕಳುಹಿಸಿ ತನ್ನ ಸೇವಕನ ಪ್ರಾಣವನ್ನು ಉಳಿಸಿಕೊಡಬೇಕೆಂದು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.
Kannada BSI Bible 2016
ಅವನು ಯೇಸುವಿನ ವಿಷಯ ಕೇಳಿದಾಗ ಆತನು ಬಂದು ತನ್ನ ಆಳನ್ನು ಗುಣ ಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಆತನ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಯೇಸುವಿನ ಸುದ್ದಿಯನ್ನು ಕೇಳಿ ಆತನ ಬಳಿಗೆ - ನೀನು ಬಂದು ನನ್ನ ಆಳನ್ನು ಸ್ವಸ್ಥಮಾಡಬೇಕೆಂದು ಆತನನ್ನು ಬೇಡಿಕೊಳ್ಳುವ ಹಾಗೆ ಯೆಹೂದ್ಯರ ಹಿರಿಯರನ್ನು ಕಳುಹಿಸಿದನು.
Kannada Bible (KNCL) BSI 2016
ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.