Luke 7:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.
Kannada BSI Bible 2016
ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.
Kannada Bible (KNCL) BSI 2016
ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.