Luke 7:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.
Kannada BSI Bible 2016
ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೇಟೆಯಲ್ಲಿ ಕೂತುಕೊಂಡು - ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಹುಡುಗರನ್ನು ಹೋಲುತ್ತಾರೆ.
Kannada Bible (KNCL) BSI 2016
ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.