Luke 7:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.
Kannada BSI Bible 2016
ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ.
Kannada Bible (KNCL) BSI 2016
ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ.