Luke 7:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.
Kannada BSI Bible 2016
ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಬಂದಿದ್ದಾನೆ, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ.
Kannada Bible (KNCL) BSI 2016
ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.