Luke 7:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು.
Kannada BSI Bible 2016
ಆಗ ಫರಿಸಾಯರಲ್ಲಿ ಒಬ್ಬನು ತನ್ನೊಂದಿಗೆ ಊಟ ಮಾಡ ಬೇಕೆಂದು ಅಪೇಕ್ಷಿಸಿದನು;ಆಗ ಆತನು ಆ ಫರಿಸಾ ಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕೂತು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಊಟಕ್ಕೆ ಒರಗಿಕೊಂಡನು.
Kannada Bible (KNCL) BSI 2016
ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.