Luke 7:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,
Kannada BSI Bible 2016
ಆಗ ಇಗೋ, ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕೂತು ಕೊಂಡಿದ್ದಾನೆಂದು ಒಬ್ಬ ಪಾಪಿಯಾದ ಸ್ತ್ರೀಯು ತಿಳಿದು ಸುಗಂಧತೈಲದ ಭರಣಿಯನ್ನು ತಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು
Kannada Bible (KNCL) BSI 2016
ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,